ದೀಪಾವಳಿ ಸಂಭ್ರಮದ ನಡುವೆ ಪಟಾಕಿ ಕಿಡಿಗೆ ಐದು ಬೈಕ್ಗಳು ಬೆಂಕಿಗಾಹುತಿಯಾಗಿರುವ ಘಟನೆ ನಡೆದಿದೆ ಎನ್ನಲಾಗುತ್ತಿದೆ. ನಗರದ ಕೇಶ್ವಾಪುರದ ದಯಾನಂದ ಕಾಲೋನಿಯ ಕೆ.ಎ. ಆದೋನಿ ಕಟ್ಟಡದಲ್ಲಿ ಈ ಘಟನೆ ಸಂಭವಿಸಿದೆ.
ಒಂದೇ ಕುಟುಂಬಕ್ಕೆ ಸೇರಿದ ಸುಮಾರು ನಾಲ್ಕು ಬೈಕ್ಗಳು ಬೆಂಕಿಗೆ ಆಹುತಿಯಾಗಿದ್ದು, ಮನೆಯೊಳಗೂ ಹೊಗೆ ಆವರಿಸಿ ಆತಂಕ ಸೃಷ್ಟಿಯಾಗಿತ್ತು. ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಎಚ್ಚೆತ್ತ ಕುಟುಂಬಸ್ಥರು ತಕ್ಷಣ ಬೆಂಕಿ ನಂದಿಸಿ ದೊಡ್ಡ ಅನಾಹುತವನ್ನು ತಪ್ಪಿಸಿದ್ದಾರೆ.
ಪಟಾಕಿ ಸಿಡಿಸುವಾಗ ಸಾರ್ವಜನಿಕರು ಎಚ್ಚರಿಕೆ ವಹಿಸುವಂತೆ ಕುಟುಂಬಸ್ಥರು ಮನವಿ ಮಾಡಿದ್ದಾರೆ.
ಸ್ಥಳಕ್ಕೆ ಡಿಸಿಪಿ ಶೃತಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಬೆಂಕಿಗೆ ಮೂಲ ಕಾರಣ ಏನು ಅನ್ನೋದು ತನಿಖೆನಂತರ ತಿಳಿಯಬೇಕಿದೆ , ಅಗ್ನಿಶಾಮಕ ಹಾಗೂ ಎಸ್ಒಸಿ ತಂಡದಿಂದಲೂ ಪರಿಶೀಲನೆ ನಡೆದಿದೆ. ಈ ಸಂಬಂಧ ಕೇಶ್ವಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.