ಹುಬ್ಬಳ್ಳಿ ನಗರದ ಗ್ರಾಮೀಣ ಘಟಕ-1 ಬಸ್ ಡಿಪೋ ಆವರಣದಲ್ಲೇ ಸಾರಿಗೆ ಬಸ್ ಚಾಲಕರೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಿನ್ನೆ ತಡರಾತ್ರಿ ನಡೆದಿದೆ.
ಮುಂಡರಗಿ ಮೂಲದ ಮಂಜುನಾಥ್ ಎಂಬುವವರೇ ಆತ್ಮಹತ್ಯೆ ಮಾಡಿಕೊಂಡ ಚಾಲಕ ಎಂದು ತಿಳಿದು ಬಂದಿದೆ. ಡಿಪೋ ಆವರಣದಲ್ಲಿನ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಹೇಳಲಾಗುತ್ತಿದೆ.
ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಇನ್ನು ಸ್ಥಳಕ್ಕೆ ಆಗಮಿಸಿದ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ತನಿಖೆ ಕೈಗೊಂಡಿದ್ದಾರೆ