ಹುಬ್ಬಳ್ಳಿ: ನಗರದ ಚೆನ್ನಮ್ಮ ವೃತ್ತದ ಬಳಿ ರಾತ್ರಿ ವೇಳೆ ಯುವಕನ ಮೇಲೆ ಕಟ್ಟಿಗೆಯಿಂದ ಹಲ್ಲೆ ನಡೆಸಲು ಮುಂದಾಗಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಮದ್ಯಪಾನ ಮಾಡಿ ಸಂಚರಿಸುವವರನ್ನು ಗುರಿಯಾಗಿಸಿಕೊಂಡು ಹಣ, ಮೊಬೈಲ್ ಕಸಿದುಕೊಳ್ಳುವ ಯುವಕರು ಗುಂಪು ಸಕ್ರಿಯವಾಗಿದೆ. ‘ಮಾವ-ಅಳಿಯ’ ನಾಟಕವಾಡಿ ಲೂಟಿ ಮಾಡುತ್ತಾರೆ ಎಂಬ ಆರೋಪವೂ ಕೇಳಿಬಂದಿದೆ.
ಈ ಹಿನ್ನೆಲೆಯಲ್ಲಿ ರಾತ್ರಿ ವೇಳೆ ಸಾರ್ವಜನಿಕರ ಸುರಕ್ಷತೆಗಾಗಿ ಪೊಲೀಸ್ ಗಸ್ತು ಹೆಚ್ಚಿಸಿ, ಆರೋಪಗಳ ಬಗ್ಗೆ ತನಿಖೆ ನಡೆಸಬೇಕೆಂಬ ಒತ್ತಾಯ ಕೇಳಿಬಂದಿದೆ.