Home / ಕ್ರೈಂ / ಹುಬ್ಬಳ್ಳಿಯಲ್ಲಿ ಯುವಕನನ್ನು ಕಾರಿನಲ್ಲಿ ಅಪಹರಿ...

ಹುಬ್ಬಳ್ಳಿಯಲ್ಲಿ ಯುವಕನನ್ನು ಕಾರಿನಲ್ಲಿ ಅಪಹರಿಸಿ ಆರೇಳು ಜನರಿಂದ ಮಾರಣಾಂತಿಕ ಹ****ಲ್ಲೆ!

E
By ETV 24X7 Chief Admin
November 5, 2026 252 views 0 comments Edit Article
ಹುಬ್ಬಳ್ಳಿಯಲ್ಲಿ ಯುವಕನನ್ನು ಕಾರಿನಲ್ಲಿ ಅಪಹರಿಸಿ ಆರೇಳು ಜನರಿಂದ ಮಾರಣಾಂತಿಕ ಹ****ಲ್ಲೆ!

ಹುಬ್ಬಳ್ಳಿ: ಕ್ಷುಲ್ಲಕ ಕಾರಣಕ್ಕೆ ಯುವಕನೊಬ್ಬನನ್ನು ಕಾರಿನಲ್ಲಿ ಅಪಹರಿಸಿಕೊಂಡು ಹೋಗಿ ಆರೇಳು ಜನರ ಗುಂಪು ಸುಮಾರು ಒಂದು ಗಂಟೆ ಕಾಲ ಮನಬಂದಂತೆ ಥಳಿಸಿರುವ ಆರೋಪ ಕೇಳಿಬಂದಿದೆ. ಹಳೆ ದ್ವೇಷದ ಹಿನ್ನೆಲೆಯಲ್ಲಿ ಈ ಹಲ್ಲೆ ನಡೆದಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ.

Instagram Reel @etv24x7_kannada_official
Instagram ನಲ್ಲಿ ವೀಕ್ಷಿಸಿ
Etv24×7 on Instagram: "ಹುಬ್ಬಳ್ಳಿಯಲ್ಲಿ ಯುವಕನನ್ನು ಕಾರಿನಲ್ಲಿ ಅಪಹರಿಸಿ ಆರೇಳು ಜನರಿಂದ ಮಾರಣಾಂತಿಕ ಹ****ಲ್ಲೆ!"
ಪ್ಲೇ ಮಾಡಲು ಕ್ಲಿಕ್ ಮಾಡಿ • Watch Reel

ಹುಬ್ಬಳ್ಳಿ ಹೊರವಲಯದ ತಾರಿಹಾಳ ರಾಮನಗರದಲ್ಲಿ ಇಂದು ಬೆಳಗಿನ ಜಾವ ಈ ಘಟನೆ ನಡೆದಿದೆ. ಹಲ್ಲೆಗೊಳಗಾದ ಯುವಕನನ್ನು 25 ವರ್ಷದ ಸುರೇಶ್ ವಾಲ್ಮೀಕಿ ಎಂದು ಗುರುತಿಸಲಾಗಿದೆ.

YouTube Video Preview
ಪ್ಲೇ ಮಾಡಲು ಕ್ಲಿಕ್ ಮಾಡಿ • Watch Video

ಇಂದು ಬೆಳಗ್ಗೆ ಸುರೇಶ್ ತಾರಿಹಾಳದ ಬಳಿ ತೆರಳಿದ್ದ ವೇಳೆ ಮಾರುತಿ, ರವಿ, ರಾಹುಲ್, ರತನ್ ಸೇರಿದಂತೆ ಆರೇಳು ಮಂದಿ ಆತನನ್ನು ಕಾರಿನಲ್ಲಿ ಬಲವಂತವಾಗಿ ಕರೆದೊಯ್ದಿದ್ದಾರೆ ಎನ್ನಲಾಗಿದೆ. ಬಳಿಕ ರಾಮನಗರದಲ್ಲಿರುವ ಆರೋಪಿಗಳ ಮನೆಯ ಹತ್ತಿರ ಕರೆದೊಯ್ದು ಸುಮಾರು ಒಂದು ಗಂಟೆ ಕಾಲ ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಹಲ್ಲೆಯಿಂದ ಸುರೇಶ್ ಅವರ ಕಣ್ಣು, ಹೊಟ್ಟೆ ಹಾಗೂ ಕಾಲುಗಳ ಭಾಗದಲ್ಲಿ ಗಂಭೀರ ಗಾಯಗಳಾಗಿವೆ. ತೀವ್ರವಾಗಿ ಗಾಯಗೊಂಡಿರುವ ಆತನನ್ನು ತಕ್ಷಣ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸದ್ಯ ಚಿಕಿತ್ಸೆ ಪಡೆಯುತ್ತಿದ್ದಾನೆ .

ಕ್ಷುಲ್ಲಕ ಕಾರಣ ಅಥವಾ ಹಿಂದಿನ ವೈಷಮ್ಯದ ಹಿನ್ನೆಲೆಯಲ್ಲಿ ಈ ಹಲ್ಲೆ ನಡೆದಿದೆಯೇ ಎಂಬ ಅನುಮಾನ ವ್ಯಕ್ತವಾಗಿದೆ. ಆರೇಳು ಮಂದಿ ಸೇರಿಕೊಂಡು ಯುವಕನ ಮೇಲೆ ಹಲ್ಲೆ ನಡೆಸಿರುವ ಆರೋಪ ಪ್ರಕರಣದ ಗಂಭೀರತೆಯನ್ನು ಹೆಚ್ಚಿಸಿದೆ.

ಘಟನೆ ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಪ್ರಕರಣದ ಸಂಪೂರ್ಣ ಹಿನ್ನೆಲೆ ಹಾಗೂ ಹಲ್ಲೆಯಲ್ಲಿ ಭಾಗಿಯಾಗಿದ್ದಾರೆ ಎನ್ನಲಾದವರ ಪಾತ್ರದ ಕುರಿತು ಪೊಲೀಸರ ತನಿಖೆಯಿಂದ ಹೆಚ್ಚಿನ ಮಾಹಿತಿ ಹೊರಬರಬೇಕಿದೆ.

TAGS: ETV 24X7 Breaking
SHARE THIS ARTICLE
E

ETV 24X7 Chief Admin

Senior Staff Journalist and Correspondent at ETV 24X7. Covering breaking global stories, contemporary culture, and modern innovations.

ETV 24X7 Live Search

Search Articles

Type any keyword to instantly search stories across categories.